ರಾಬರ್ಟ್ ಕ್ಲೈವ್

ರಾಬರ್ಟ್ ಕ್ಲೈವ್ (1725-1774) - ಬ್ರಿಟಿಷ್ ಸೈನಿಕ, ರಾಜಕಾರಣಿ, ಭಾರತದಲ್ಲಿ ಬ್ರಿಟಿಷ್ ಚಕ್ರಾಧಿಪತ್ಯದ ಸ್ಥಾಪನೆಗೆ ಕಾರಣರಾದವರಲ್ಲೊಬ್ಬ.

Robert Clive, 1st Baron Clive by Nathaniel Dance, (later Sir Nathaniel Dance-Holland, Bt).jpg

ಆರಂಭಿಕ ಬದುಕು

ತಂದೆ ದೀರ್ಘಕಾಲ ಪಾರ್ಲಿಮೆಂಟ್ ಸದಸ್ಯನಾಗಿದ್ದ. ಬಾಲ್ಯದಲ್ಲಿ ಅಪ್ರಯೋಜಕನೂ ತುಂಟನೂ ಆಗಿದ್ದ ರಾಬರ್ಟ್ ಹೆಚ್ಚು ಕಲಿಯಲಿಲ್ಲ. ಬೇಸರಗೊಂಡ ತಂದೆ ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯ ಗುಮಾಸ್ತಗಿರಿಯನ್ನು ದೊರಕಿಸಿಕೊಟ್ಟು ರಾಬರ್ಟನ 18ನೆಯ ವಯಸ್ಸಿನಲ್ಲಿ (1743) ಅವನನ್ನು ಭಾರತಕ್ಕೆ ಕಳಿಸಿದ. ಮದ್ರಾಸಿನಲ್ಲಿ ಗುಮಾಸ್ತನಾಗಿದ್ದ ರಾಬರ್ಟ್ ಜಗಳಗಂಟನಾಗಿದ್ದು ಒಂಟಿತನದ ಜೀವನ ನಡೆಸುತ್ತಿದ್ದ. ಬಾಳಿನಲ್ಲಿ ಬೇಸರಹೊಂದಿ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿ ಬದುಕಿಕೊಂಡಾಗ ತನ್ನಿಂದ ಯಾವುದೋ ಮಹತ್ಕಾರ್ಯ ನಡೆಯಬೇಕಾಗಿರುವುದರಿಂದ ದೇವರು ತನ್ನನ್ನು ಉಳಿಸಿದುದಾಗಿ ಬಗೆದು ಸ್ವಂತ ವಿದ್ಯಾಭ್ಯಾಸದ ಕಡೆಗೆ ಅವನು ಗಮನ ನೀಡತೊಡಗಿದ.

Other Languages